ಗ್ಯಾಸ್ ಟ್ಯಾಂಕರ್ ವಾಲ್ವ್ ಓಪನ್ : ಭಾರೀ ಪ್ರಮಾಣ ಗ್ಯಾಸ್ ಸೋರಿಕೆ : ಸತತ ಕಾರ್ಯಾಚರಣೆ ಮೂಲಕ ಗ್ಯಾಸ್ ಸೋರಿಕೆಗೆ ತಡೆ

November 4, 2019
11:41 AM

ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

Advertisement
Advertisement
Advertisement
Advertisement

ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್  ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

Advertisement

ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ
March 1, 2025
7:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...