ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ವೃದ್ಧಿ : ಶಿವಳ್ಳಿ ಸಂಪನ್ನ ಮಹಾಸಭೆಯಲ್ಲಿ ಹರಿಣಿ ಪುತ್ತೂರಾಯ

July 26, 2019
9:53 PM

ಸುಳ್ಯ : ನೀರು ನಿಂತಲ್ಲೇ ನಿಂತರೆ ಅದು ಕಲ್ಮಶಗೊಳ್ಳುತ್ತದೆ. ಇದು ಬದುಕಿಗೂ ಅನ್ವಯಿಸುತ್ತದೆ. ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ಹೆಚ್ಚುತ್ತದೆ. ಆ ಮೂಲಕ ಬದುಕಿಗೊಂದು ಅರ್ಥ ಬರುತ್ತದೆ. ಸಂಘಟನೆಗಳಲ್ಲಿ ಚಲನಶೀಲತೆ ಇದ್ದರೆ ಅದು ಗಟ್ಟಿಗೊಳ್ಳುತ್ತಾ ಹೋಗುತ್ತದೆ. ಎಂದು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಹೇಳೀದರು.
ಅವರು ಶ್ರೀಗುರುರಾಘವೇಂದ್ರ ಮಠದಲ್ಲಿ ಜರಗಿದ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ರತ್ನಾವತಿ ಸೋಮಯಾಗಿ, ಅಜ್ಜಾವರ ಸರಸ್ವತಿ ಬೈಪಾಡಿತ್ತಾಯ ಮತ್ತು ಕಮಲಮ್ಮ ಕಾಯಂಬಾಡಿ ಇವರನ್ನು ಬೃಂದಾವನ ಸೇವಾ ಸಮಿತಿ ಟ್ರಸ್ಟಿ ಸುಮಾ ಸುಬ್ಬಾರಾವ್ ಸಮ್ಮಾನಿಸಿದರು. ಮುರಳೀಕೃಷ್ಣ ಕಣ್ಣರಾಯ ಸಭಾಧ್ಯಕ್ಷತೆ ವಹಿಸಿದ್ದರು.

ಪ್ರತಿಭಾ ಪುರಸ್ಕಾರ :

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದ ಕೃಪಾ ಅಮ್ಮಣ್ಣಾಯ ಹಾಗೂ ಸಿಇಟಿ ನೀಟ್ ಪರೀಕ್ಷೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದ ಅಮಿಷಾ ಸೋಮಯಾಗಿ ಹಾಗೂ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಬೃಂದಾವನ ಸೇವಾಟ್ರಸ್ಟ್ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್ ಸ್ವಾಗತಿಸಿ, ಮಹಿಳಾ ಘಟಕದ ಕಾರ್ಯದರ್ಶಿ ಸೌಮ್ಯ ಸೋಮಯಾಗಿ ವರದಿ ವಾಚಿಸಿದರು. ಯುವ ಘಟಕದ ಅಧ್ಯಕ್ಷ ಪ್ರಥಮ ಮೂಡಿತ್ತಾಯ ವಂದಿಸಿದರು. ಶರಣ್ಯ ಮತ್ತು ಅರ್ಜುನ್ ಆಚಾರ್ ನಿರೂಪಿಸಿದರು. ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಮಾತುಗಳನ್ನಾಡಿದರು.

ಮಹಾಸಭೆಯಲ್ಲಿ ಮುಂದಿನ ಸಾಲಿನ ಅಧ್ಯಕ್ಷರಾಗಿ ರಾಮಕೃಷ್ಣ ಮಾಳತ್ತಾಯ ಅಧಿಕಾರ ಸ್ವೀಕರಿಸಿದರು. ಪ್ರವೀಣಾ ಸೋಮಯಾಗಿ, ಸಂಜನಾ ಸೋಮಯಾಗಿ, ಪ್ರಣವ್ ಮೂಡಿತ್ತಾಯ, ರೂಪಾ ಕಣ್ಣರಾಯ, ಹೇಮ ವೈಲಾಯ ಸಹಕರಿಸಿದರು. ಬಳಿಕ ದುರ್ಗಾಪೂಜೆ ನಡೆಯಿತು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror