ಸುಳ್ಯ: ನಗರ ಪಂಚಾಯತ್ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು 17ನೇ ವಾರ್ಡ್ ಬೋರುಗುಡ್ಡೆಯ ಪಕ್ಷೇತರ ಅಭ್ಯರ್ಥಿ ಆರ್.ಕೆ.ಮಹಮ್ಮದ್ ಹೇಳಿದ್ದಾರೆ.ತ್ರಿಕೋನ ಸ್ಪರ್ಧೆಯಲ್ಲಿ ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳುತ್ತಾರೆ.
ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ ಮಾಡುವ ಕಾರಣ ಬೋರುಗುಡ್ಡೆ ವಾರ್ಡ್ ಅತ್ಯಂತ ಗಮನ ಸೆಳೆಯುವ ವಾರ್ಡ್ ಆಗಿ ಮಾರ್ಪಾಡಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel