ಜನರಿಗೆ ಒತ್ತಡ ತಂದು ಸಾಲ ವಸೂಲಿ ಮಾಡದಂತೆ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ತಹಶೀಲ್ದಾರ್ ಎಚ್ಚರಿಕೆ

November 20, 2019
9:32 PM

ಸುಳ್ಯ: ಜನರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಇದೇ ರೀತಿ ಮುಂದುವರಿದರೆ ಅಂತವರ ಮೇಲೆ ಕೇಸು ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಕಿರು ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಕಚೇರಿಗೆ ಫೈನಾನ್ಸ್ ಪ್ರತಿನಿಧಿಗಳನ್ನು ಕರೆಸಿ ಮಾತನಾಡಿದ ತಹಶೀಲ್ದಾರ್ ಯಾವ ರೀತಿ ವ್ಯವಹಾರ ನಡೆಸುತ್ತಿದ್ದೀರಿ ಮತ್ತು ಕೊಟ್ಟ ಸಾಲಕ್ಕೆ ಎಷ್ಟು ಬಡ್ಡಿ ಹಾಕುತ್ತಿದ್ದೀರಿ, ಜತೆಗೆ ಆರ್‌ಬಿಐ ನಿಂದ ಪಡೆದ ಪರವಾನಿಗೆ ಪತ್ರ ಮತ್ತು ಅದರ ನಿಯಮದಂತೆ ವ್ಯವಹರಿಸುತ್ತಿರುವುದಕ್ಕೆ ದಾಖಲೆ ನೀಡಬೇಕು. ಅದನ್ನು ನಾವೂ ಪರಿಶೀಲಿಸುತ್ತೇವೆ. ನೀವು ನಿಯಮ ಮೀರಿ ವ್ಯವಹಾರ ನಡೆಸಿದ್ದು ಮತ್ತು ಜನರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡುತ್ತಿರುವುದು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಕೂಡ ತಮ್ಮ ಅಹವಾಲುಗಳನ್ನು ತಹಶೀಲ್ದಾರ್ ಮುಂದೆ ಇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror