ಜನರೆಡೆಗೆ ತೆರಳಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ : ಸಾರ್ವಜನಿಕರಿಂದ ಶ್ಲಾಘನೆ

October 14, 2019
10:26 PM

ಸುಬ್ರಹ್ಮಣ್ಯ: ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು 3 ವರ್ಷ ಅವಧಿ ಪೂರೈಸಿ ಅವಧಿ ಕೊನೆಗೊಂಡಿದೆ. ಕಳೆದ 3 ವರ್ಷಗಳಿಂದ ಜನಪರವಾದ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳ ಮೂಲಕ ದೇವಸ್ಥಾನದ ಆಡಳಿತವೂ ಜನರೆಡೆಗೆ ತೆರಳಬಹುದು ಎಂದು ತೋರಿಸಿದೆ. ಹೀಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ, ಆಡಳಿತ ಮಂಡಳಿಗೆ ಅಭಿನಂದನಾ ಸಭೆಯೂ ನಡೆದಿದೆ.

2016 ಅ‌.15 ರಂದು ನಿತ್ಯಾನಂದ ಮುಂಡೋಡಿ ನೇತೃತ್ವದ ವ್ಯವಸ್ಥಾಪನಾ ಸಮಿತಿ  ದೇವಸ್ಥಾನದ ಅಧಿಕಾರ ಸ್ವೀಕರಿಸಿತ್ತು. ಜನಪರವಾದ ಕೆಲಸ ಕಾರ್ಯಗಳು ಹಾಗೂ ಧಾರ್ಮಿಕ ವಿಚಾರಗಳಿಗೆ ಆದ್ಯತೆ ನೀಡಿತ್ತು. ಕ್ಷೇತ್ರದ ಅಭಿವೃದ್ಧಿ ಹಾಗೂ ಕ್ಷೇತ್ರದಲ್ಲಿ ನಡೆಯುವ ಕೆಲವು ಕ್ಷೇತ್ರ ವಿರೋಧಿ ಕಾರ್ಯಗಳ ನಿಯಂತ್ರಣಕ್ಕೂ ಪ್ರಯತ್ನ ಮಾಡಿತ್ತು ಎಂದು ಸಾರ್ವಜನಿಕರು ಹೇಳುತ್ತಾರೆ. ಹೀಗಾಗಿಯೇ ಅಭಿನಂದನಾ ಕಾರ್ಯಕ್ರಮವೂ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ರವೀಂದ್ರ ಎಂ.ಎಚ್ ವರ್ಗಾವಣೆಗೊಂಡ ಬಳಿಕ ಪುತ್ತೂರು ಸಹಾಯಕ ಕಮೀಶನರ್ ಅವರು ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕವಾಗಿದ್ದು ಇದೀಗ  ಮಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಆಡಳಿತ ಮಂಡಳಿ ವತಿಯಿಂದ  ಅ.14 ರಂದು ಕ್ಷೇತ್ರದಲ್ಲಿ ನಡೆಸಲಾಗಿದ್ದ ಹಲವು ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆಗೆ ಸಿದ್ಧತೆಗಳನ್ನು ನಡೆಸಿತ್ತು.ಸೋಮವಾರ ಬೆಳಗ್ಗೆ ಉದ್ಘಾಟನೆಗಳು ಆಗಬೇಕಿತ್ತು. ಕೊನೆ ಕ್ಷಣದಲ್ಲಿ ಉದ್ಘಾಟನೆ ಕಾರ್ಯಕ್ರಮಗಳು ರದ್ದುಗೊಂಡಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror