ಜಾಕೆ ಮಾಧವ ಗೌಡರಿಗೆ ಅಭಿನಂದನಾ ಕಾರ್ಯಕ್ರಮ- ಸುಳ್ಯದಲ್ಲಿ ಪೂರ್ವಭಾವಿ ಸಭೆ

October 23, 2019
9:43 AM

ಸುಳ್ಯ: ಸುಳ್ಯ ತಾಲೂಕಿನ ಹಿರಿಯ ಸಹಕಾರಿ, ಸಾಮಾಜಿಕ ರಾಜಕೀಯ ಧುರೀಣ ಜಾಕೆ ಮಾಧವ ಗೌಡರಿಗೆ 70 ಸಂವತ್ಸರಗಳು ತುಂಬಿದ ಹಿನ್ನಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

Advertisement

ನ.16 ರಂದು ಪಂಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಳ್ಯ ಭಾಗದ ಅಭಿಮಾನಿಗಳು ಪೂರ್ತಿಯಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಲು, ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಆಮಂತ್ರಣ ಪತ್ರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ಪ್ರಮುಖರಾದ ಭರತ್ ಮುಂಡೋಡಿ, ಎಂ.ಬಿ.ಸದಾಶಿವ, ಡಾ.ಪ್ರಭಾಕರ ಶಿಶಿಲ, ಕುತ್ಯಾಳ ನಾಗಪ್ಪ ಗೌಡ, ನಳಿನ್ ಕುಮಾರ್ ಕೋಡ್ತುಗುಳಿ, ಸುಕುಮಾರ ಕೋಡ್ತುಗುಳಿ, ಡಾ.ಸುಂದರ್ ಕೇನಾಜೆ, ದಿನೇಶ್ ಮಡಪ್ಪಾಡಿ, ಹರೀಶ್ ಬಂಟ್ವಾಳ್, ಶಂಕರ್ ಪೆರಾಜೆ,  ಡಾ.ಪುರುಷೋತ್ತಮ ಕೆ.ಜಿ, ಪಿ.ಎಸ್‌.ಗಂಗಾಧರ, ಜಯರಾಮ ದೇರಪ್ಪಜ್ಜನಮನೆ, ದೊಡ್ಡಣ್ಣ ಬರೆಮೇಲು, ಡಿ.ಎಸ್.ಗಿರೀಶ್, ರಾಕೇಶ್ ಕುಂಠಿಕಾನ, ಪಿ.ಎ.ಮಹಮ್ಮದ್, ರಾಜೇಶ್ ಎಲಿಮಲೆ, ಶೈಲೇಶ್ ಅಂಬೆಕಲ್ಲು, ವಿಜಯಕುಮಾರ್ ಮಯೂರಿ ಮತ್ತಿತರರು ಸಲಹೆ ಸೂಚನೆಗಳನ್ನು ನೀಡಿದರು.

ನವೆಂಬರ್ 16 ರಂದು ಸಂಜೆ ಪಂಜ ಸೊಸೈಟಿ ಬಳಿಯಿಂದ ಮೆರವಣಿಗೆ ನಡೆಯಲಿದೆ. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಗುವುದು. ಸಮಾರಂಭದಲ್ಲಿ ಜಯಪ್ರಕಾಶ್ ಹೆಗ್ಡೆ, ಡಾ. ಮೋಹನ್ ಆಳ್ವ, ಡಾ.ಎಂ.ಎನ್.ರಾಜೇಂದ್ರಕುಮಾರ್, ಡಾ.ಪುರುಷೋತ್ತಮ ಬಿಳಿಮಲೆ, ಶಾಸಕ ಎಸ್.ಅಂಗಾರ, ಡಾ.ಕೆ.ವಿ.ಚಿದಾನಂದ ಮೊದಲಾದ ಗಣ್ಯರನ್ನು ಆಹ್ವಾನಿಸಲಾಗುತ್ತದೆ.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group