ಸುಳ್ಯ: ಕಾರ್ಮಿಕರ ಹಿತರಕ್ಷಣೆಗಾಗಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(CITU) ದೇಶದಲ್ಲಿ ಜನ್ಮತಾಳಿ 49 ವರ್ಷಗಳನ್ನು ಪೂರೈಸಿದ ಸಂದ ರ್ಭದಲ್ಲಿ ದ.ಕ.ಜಿಲ್ಲೆಯ ಹಲವೆಡೆ ಧ್ವಜಾರೋಹಣ ಮಾಡುವ ಮೂಲಕ ಸ್ಥಾಪನಾ ದಿನವನ್ನು ಆಚರಿಸಲಾಯಿತು.
ಬೆಳ್ತಂಗಡಿ ಪೇಟೆಯಲ್ಲಿ 300 ಕ್ಕೂ ಮಿಕ್ಕಿದ ಕಾರ್ಮಿಕರು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಅಂಬೇಡ್ಕರ್ ಭವನದಲ್ಲಿ ಸೇರಿದ್ದ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿದ ಸಿ ಐ ಟಿ ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸಿ ಐ ಟಿ ಯು ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನುಸಿ ಐ ಟಿ ಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಶಿವಕುಮಾರ್ ವಹಿಸಿದ್ದರು.ವೇದಿಕೆಯಲ್ಲಿ ಸಿ ಐ ಟಿ ಯು ತಾಲೂಕು ಮುಖಂಡರಾದ ವಸಂತ ನಡ,ರೋಹಿಣಿ,ಜಯಂತಿ ಶೇಖರ್ ಲಾಯಿಲಾ ಉಪಸ್ಥಿತರಿದ್ದರು. ಸುಳ್ಯ,ಪುತ್ತೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಸಿ ಐ ಟಿ ಯು ಸ್ಥಾಪನಾ ದಿನವನ್ನು ಆಚರಿಸಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement