ಸುಳ್ಯ: ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರವೇ ದೇವರ ಮೊರೆ ಹೋಗಲು ನಿರ್ಧರಿಸಿದೆ. ಜೂ.6 ರಂದು ರಾಜ್ಯದ ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಸೂಚಿಸಲಾಗಿದೆ. ಈ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ಮಳೆಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ನಡೆದಿದ್ದು ಇದೀಗ ಸರಕಾರದ ಪರವಾಗಿ ಮತ್ತೊಮ್ಮೆ ನಡೆಯಲಿದೆ.
ಸರಕಾರ ನೀಡಿರುವ ಸುತ್ತೋಲೆಯಲ್ಲಿ ಜೂ.6 ರಂದು ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ತಿಳಿಸಿದೆ. ಅದು ಬ್ರಾಹ್ಮೀ ಮುಹೂರ್ತದಲ್ಲಿ ಈ ವಿಶೇಷ ಪೂಜೆ ಅಭಿಯಾನ ಆರಂಭಿಸಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜೂನ್.6 ರಂದು ಮಳೆಗಾಗಿ ದೇವಸ್ಥಾನಗಳಲ್ಲಿ ಪೂಜೆ"