ಜೂ.1 ರಿಂದ ಅರಂತೋಡು-ತೊಡಿಕಾನ ಸಹಕಾರ ಸಂಘದ ಶತ ಸಂಭ್ರಮ

Advertisement

ಸುಳ್ಯ: ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಜೂನ್ 1 ಹಾಗೂ 2 ರಂದು  ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂ. 1 ರಂದು ಬೆಳಿಗ್ಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶತಮಾನೋತ್ಸವದ ನೆನಪಿಗೆ ನಿರ್ಮಿಸಿದ ಸಹಕಾರ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಉದ್ಘಾಟಿಸುವರು. ಶಾಸಕ ಎಸ್‌.ಅಂಗಾರ ಅಧ್ಯಕ್ಷತೆ ವಹಿಸುವರು. ಕೃಷಿದರ್ಶಿನಿಯ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್, ಸಮಾರಂಭದ ಉದ್ಘಾಟನೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆಯನ್ನು ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ನೆರವೇರಿಸುವರು.

Advertisement

ಎ.ಓ.ಎಲ್.ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪದ್ಮಶ್ರೀ ಪುರಸ್ಕೃತ ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್, ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಅವರನ್ನು ಸನ್ಮಾನಿಸಲಾಗುವುದು. ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಕೊಡೆಂಕೇರಿ, ಸಹಕಾರ ಸಂಘಗಳ ಉಪನಿಬಂಧಕ ಡಾ.ಸುರೇಶ್ ಗೌಡ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ‘ಉದ್ಯಮ-ಸಣ್ಣ ಕೈಗಾರಿಕೆಗಳು ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರ‌ಮಗಳು ನಡೆಯಲಿದೆ. ಕೃಷಿ ವಸ್ತು ಪ್ರದರ್ಶನ ಕೃಷಿ ದರ್ಶಿನಿಯಲ್ಲಿ 50ಕ್ಕೂ ಮಿಕ್ಕಿ ಸ್ಟಾಲ್ ಗಳು ಇರಲಿದೆ.

ಜೂನ್ 2ರಂದು ಬೆಳಿಗ್ಗೆ ಒಂಭತ್ತರಿಂದ ಮಧ್ಯಾಹ್ನವರೆಗೆ ಜಾನುವಾರು ಜಾತ್ರೆ ನಡೆಯಲಿದೆ. ಪೂ.10ರಿಂದ ಕೃಷಿ ವಿಚಾರ ಸಂಕಿರಣ ನಡೆಯಲಿದ್ದು ‘ಹಳದಿ ರೋಗ ಪೀಡಿತ ಅಡಕೆ ಕೃಷಿಗೆ ಪರ್ಯಾಯವಾಗಿ ತಾಳೆ ಬೆಳೆ’ ಮತ್ತು ‘ಲಾಭದಾಯಕ ಕಾಳುಮೆಣಸು ಕೃಷಿ’ ಬಗ್ಗೆ ಗೋಷ್ಠಿಗಳು ನಡೆಯಲಿದೆ. ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೆಬ್ ಸೈಟ್ ಲೋಕಾರ್ಪಣೆ ಮಾಡುವರು. ಬಳಿಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂತೋಷ್ ಕುತ್ತಮೊಟ್ಟೆ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ವಾಸುದೇವ ನಾಯಕ್‌.ವಿ. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಜೂ.1 ರಿಂದ ಅರಂತೋಡು-ತೊಡಿಕಾನ ಸಹಕಾರ ಸಂಘದ ಶತ ಸಂಭ್ರಮ"

Leave a comment

Your email address will not be published.


*