ಸಂಪಾಜೆ: ಮೇ.30 ರಂದು ನರೇಂದ್ರ ಮೋದಿಯವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವುದರಿಂದ ಸಂಪಾಜೆ ಗ್ರಾಮದಲ್ಲಿ ಉಚಿತ ರಕ್ತದಾನ ಶಿಬಿರವನ್ನು ಜೂ.1 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಸಂಪಾಜೆ-ಕೊಡಗು ಸ್ಥಾನೀಯ ಸಮಿತಿ ಪ್ರಕಟಣೆ ತಿಳಿಸಿದೆ.
ಸರ್ವರೊಳಗೆ ಒಂದಾಗಿ ಸಂಪಾಜೆ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆದು ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಜನ್ನಮನ್ನಣೆ ಗಳಿಸಿದ ದಿ. ಶ್ರೀ ಬಾಲಚಂದ್ರ ಕಳಗಿಯವರ ಜ್ಞಾಪಕಾರ್ಥವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ಉಚಿತ ರಕ್ತದಾನ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪಾಜೆಯ ಸಮಸ್ತ ಗ್ರಾಮಸ್ಥರು ಮತ್ತು ಚಂದ್ರಣ್ಣನ ಅಭಿಮಾನಿ ಬಂಧುಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel