ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಜೂ.15 ರಂದು ನಡೆಯಲಿದೆ. ದರ್ಬೆ ವೃತ್ತದಿಂದ ಬೊಳುವಾರು ವರೆಗೆ ಮೆರವಣಿಗೆ ನಡೆಯಲಿದ್ದು, ನಂತರ ಸಭಾಕಾರ್ಯಕ್ರಮವು ಪುತ್ತೂರು ಬಂಟರಭವನದಲ್ಲಿ ನಡೆಯಲಿದೆ.
ಪುತ್ತೂರಿನ ಪ್ರತಿನಿಧಿಗಳಾಗಿ ಗೆಲುವುಗಳಿಸಿರುವ ಹಾಗೂ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಡಿ.ವಿ.ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ,
ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಹಾಗೂ ವಿಜಯೋತ್ಸವ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಅಧ್ಯಕ್ಷ ಜೀವಂಧರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾದ ಶಂಭು ಭಟ್, ರಾಮದಾಸ್ ಹಾರಾಡಿ, ಗೌರಿ ಬನ್ನೂರು, ಪಕ್ಷದ ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಅಪ್ಪಯ್ಯ ಮಣಿಯಾಣಿ, ವಿಶ್ವೇಶ್ವರ ಭಟ್, ಯುವರಾಜ್ ಪೆರಿಯತ್ತೋಡಿ, ಸುನಿಲ್ ದಡ್ಡು, ಚಂದ್ರಶೇಖರ್ ರಾವ್ ಬಪ್ಪಳಿಗೆ, ಸುರೇಶ್ ಭಟ್, ವಿಶ್ವನಾಥ ಕುಲಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜೂ.15 : ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ"