ಬೆಳ್ಳಾರೆ: ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ಜೂ.4 ರಂದು ಬೆಳಗ್ಗೆ 10 ಗಂಟೆಗೆ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ ನಡೆಯಲಿದೆ.
ಪೆರುವಾಜೆ ಗ್ರಾ.ಪಂ.ಕಟ್ಟಡಕ್ಕೆ ಸ್ಥಳಾಂತರಿಸಿದ ಅಂಚೆ ಕಚೇರಿಯನ್ನು ಮುಕ್ಕೂರಿನಲ್ಲಿ ಮರು ಸ್ಥಾಪಿಸಲು ಸಂಸದರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು. ಹತ್ತು ದಿನಗಳ ಗಡುವು ನೀಡಲಾಗಿತ್ತು. ಜೂ.7 ಕ್ಕೆ ಗಡುವು ದಿನಾಂಕ ಮುಕ್ತಾಯಗೊಳ್ಳಲಿದ್ದು, ಅದರ ಮೊದಲು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel