ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗುವ ಸೂಚನೆ ಇದೆ.
ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜೂ.6 : ಕೇರಳಕ್ಕೆ ಮುಂಗಾರು ಪ್ರವೇಶ"