ಜೂ.6 : ಬಾಳಿಲ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ

Advertisement

ಬಾಳಿಲ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುದಾನದಿಂದ ನಿರ್ಮಾಣಗೊಂಡಿರುವ ಬಾಳಿಲದ ಗ್ರಾಮ ಪಂಚಾಯತ್ ನೂತನ ಕಟ್ಟಡ ಹಾಗೂ ಆರ್.ಜಿ.ಎಸ್.ವೈ ಅನುದಾನದಿಂದ ನಿರ್ಮಾಣವಾದ ನೂತನ ಸಭಾಂಗಣ ಜೂ. 6ರಂದು ಉದ್ಘಾಟನೆ ನಡೆಯಲಿದೆ.

Advertisement

ಗ್ರಾಮ ಪಂಚಾಯತ್ ಕಟ್ಟಡವನ್ನು ನಗರಾಭಿವೃದ್ಧಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಮಿನಿ ಸಭಾಂಗಣವನ್ನು ವಿಧಾನ ಪರಿಷತ್ ಸದಸ್ಯ ಹಾಗು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.  ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್.ಅಂಗಾರ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್‍ಕುಮಾರ್ ಕಟೀಲ್ ಉದ್ಘಾಟಿಸಲಿದ್ದು , ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ| ಸೆಲ್ವಮಣಿ ಆರ್, ಜಿಲ್ಲಾ ಪಂಚಾಯತ್ ಜಾಲ್ಸೂರು ಕ್ಷೇತ್ರದ ಸದಸ್ಯೆ ಪುಷ್ಪಾವತಿ ಬಾಳಿಲ, ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಾಲೂಕು ಮಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ಮಧುಕುಮಾರ್, ತಾಲೂಕು ಪಂಚಾಯತ್ ಸದಸ್ಯೆ ಜಾಹ್ನವಿ ಕಾಂಚೋಡು, ಪಂಚಾಯತ್‍ರಾಜ್ ಇಂಜಿನಿಯರಿಂಗ್ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿ.ಹನುಮಂತರಾಯಪ್ಪ, ಕಳಂಜ ಬಾಳಿಲ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಕಟ್ಟಡದ ನಿರ್ಮಣಕ್ಕೆ ಸ್ಥಳದಾನಗೈದ ಕೆದ್ಲ ನರಸಿಂಹ ಭಟ್ ಅವರಿಗೆ ಗೌರವಾರ್ಪಣೆಗೈಯಲಾಗುವುದೆಂದು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಜೂ.6 : ಬಾಳಿಲ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ"

Leave a comment

Your email address will not be published.


*