ಜೈ ಶ್ರೀ ರಾಮ್……| ಆ.5 ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ | 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ರಾಮ ಮಂದಿರ |

July 18, 2020
9:13 PM

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ  ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement

ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ  ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌‌‌ ಸಭೆ ನಡೆದಿದೆ. ಈ ಸಭೆಯಲ್ಲಿ  ಆ.  5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ  ಸಭೆಯಲ್ಲಿ  ಭಾಗವಹಿಸಿದ್ದರು. ಉಳಿದವರು ಆನ್‌ ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್‌ ಲೈನ್‌ ಮೂಲಕ  ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.

Advertisement

ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತ ಸಂಘಟನೆಗಳೊಂದಿಗೆ ಸಮಾಲೋಚನೆ | ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಬಗ್ಗೆ ಚರ್ಚೆ | ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್  ಭಾಗಿ
September 24, 2024
8:08 PM
by: ದ ರೂರಲ್ ಮಿರರ್.ಕಾಂ
ಒಂದು ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಯಶಸ್ವಿ ಅಭಿಯಾನ | ದಾಖಲೆ ನಿರ್ಮಿಸಿದ ಪ್ರಾದೇಶಿಕ ಸೇನೆ |
September 23, 2024
8:34 PM
by: ದ ರೂರಲ್ ಮಿರರ್.ಕಾಂ
ಪ್ಲಾಸ್ಟಿಕ್ ಪೆಟ್, ಬಾಟಲ್ ಗಳ ಬಳಕೆ ನಿಷೇಧ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
September 21, 2024
2:10 PM
by: ದ ರೂರಲ್ ಮಿರರ್.ಕಾಂ
ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |
September 20, 2024
9:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror