ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…

October 25, 2019
9:00 AM

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಸುಮಾರು ನಾಲ್ಕರಿಂದ ಐದು ಕಾಡಾನೆಗಳ ಹಿಂಡು ಗ್ರಾಮದ ಬಹುತೇಕ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಅ.17 ರಂದೇ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದ ಗ್ರಾಮಸ್ಥರು ಆನೆಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದರು. ಆದರೆ ಅ.20 ಕ್ಕೆ ಗ್ರಾಮಕ್ಕೆ ಭೇಟಿ ನೀಡಿದ ಡಿಆರ್‍ಎಫ್‍ಒ ಹಾಗೂ ಸಿಬ್ಬಂದಿ ವರ್ಗ ಕಾಡಾನೆ ವಿರುದ್ಧ ಕಾರ್ಯಾಚರಣೆ ನಡೆಸದೆ ಮಳೆ ಬಂತು ಎನ್ನುವ ನೆಪವೊಡ್ಡಿ ಮರಳಿದ್ದಾರೆ. ಸ್ಥಳೀಯರು ಜೀವ ಭಯದಲ್ಲಿದ್ದರೂ ಕನಿಷ್ಠ ಪಟಾಕಿಯನ್ನು ಕೂಡ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಇಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕಾಡಾನೆಗಳು ಬಹುತೇಕ ಎಲ್ಲಾ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿವೆ. ಕಾಫಿ ಹಾಗೂ ಬಾಳೆ ಕೃಷಿ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಲಕ್ಷಾಂತರ ರೂ.ನಷ್ಟವಾಗಿದೆ ಎಂದು ತಿಳಿಸಿರುವ ಸ್ಥಳೀಯರು, ಅರಣ್ಯ ಇಲಾಖೆ ಜೀವಹಾನಿ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭ ಗ್ರಾಮದ ಪ್ರಮುಖರಾದ ಜಿ.ಎ.ಶರ್ಮಿಳ, ಪ್ರಮೀಳ, ಸುನೀಲ್, ಸುಂದರ ನಾಯಕ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror