ಜ್ವರ , ಕೆಮ್ಮು, ಉಸಿರಾಟದ ತೊಂದರೆ – ಫೀವರ್ ಕ್ಲಿನಿಕ್ ಸಂಪರ್ಕಿಸಲು ಸೂಚನೆ

April 21, 2020
9:17 PM

ಮಂಗಳೂರು :  ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು  ಅಧಿಕಾರಿಗಳೊಂದಿಗೆ  ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.

ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror