ಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಸಿದ್ಧತೆ ಕುರಿತು ಸಭೆ

January 2, 2020
10:07 AM

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ‌.ಜಿಲ್ಲಾಡಳಿತ, .ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸುಳ್ಯ, ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಮಡಪ್ಪಾಡಿ ಗ್ರಾಮಸ್ಥರ ಸಹಕಾರದಲ್ಲಿ ಜನವರಿ 5 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ, ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರದ ಸಿದ್ಧತೆ ಬಗ್ಗೆ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಹಾಗು ಪತ್ರಕರ್ತರ ತಂಡ ಮಡಪ್ಪಾಡಿಗೆ ಭೇಟಿ ನೀಡಿ ಚರ್ಚಿಸಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ರೂಪುರೇಷೆ ತಯಾರಿಸಲಾಯಿತು.

Advertisement
Advertisement
Advertisement

Advertisement

ರಾಜ್ಯ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸುವ ಕಾರ್ಯಕ್ರಮದ ಯಶಸ್ವಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಇಒ ಭವಾನಿಶಂಕರ ಸೂಚನೆ ನೀಡಿದರು. ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ‌.ಹೊನ್ನಪ್ಪ, ಮಡಪ್ಪಾಡಿ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಎಪಿಎಂಸಿ ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಮಡಪ್ಪಾಡಿ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ, ಪ್ರಮುಖರಾದ ಮಿತ್ರದೇವ ಮಡಪ್ಪಾಡಿ, ವಸಂತ ಬಳ್ಳಡ್ಕ, ಸಚಿನ್ ಬಳ್ಳಡ್ಕ, ರಾಮಚಂದ್ರ ಬಳ್ಳಡ್ಕ, ಧನ್ಯ ದೇರಮಜಲು, ತನುರಾಜ್ ಅಂಬೆಕಲ್ಲು, ನಾಗವೇಣಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಲೋಕೇಶ್ ಪೆರ್ಲಂಪಾಡಿ, ಗಂಗಾಧರ ಕಲ್ಲಪಳ್ಳಿ, ತಾಲೂಕು ಸಮಿತಿ ಸದಸ್ಯ ದಿನೇಶ್ ಮಠ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಕಾರ್ಯಕ್ರಮ ನಡೆಯುವ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಶಾಲಾ ಪರಿಸರವನ್ನು ಈಗಾಗಲೇ ಸ್ವಚ್ಚಗೊಳಿಸಲಾಗಿದೆ. ಶಾಲೆಯ ರಂಗಮಂದಿರವನ್ನು ಸುಣ್ಣ ಬಣ್ಣ ಬಳಿದು ಸುಂದರಗೊಳಿಸಲಾಗಿದೆ. ಶಾಲಾ ಪರಿಸರದ ಕಾಡುನ್ನು ಕಡಿದು ಸ್ವಚ್ಛಗೊಳಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror