ಟೆಸ್ಟ್ ಕ್ರಿಕೆಟ್: ಇನ್ನಿಂಗ್ಸ್ ಗೆಲುವಿನ ಹೊಸ್ತಿಲಲ್ಲಿ ಭಾರತ

October 21, 2019
10:34 PM

ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್​ನ್ನು 497 ರನ್​ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.

Advertisement
Advertisement
Advertisement

ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್​ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.

Advertisement

ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್​ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ |
November 1, 2024
6:22 AM
by: The Rural Mirror ಸುದ್ದಿಜಾಲ
ದಾವಣಗೆರೆ | ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲಾಡಳಿತ ನಿರ್ಧಾರ
November 1, 2024
6:19 AM
by: The Rural Mirror ಸುದ್ದಿಜಾಲ
 ಚಿಕ್ಕಮಗಳೂರಿನಲ್ಲಿ ದೇವೀರಮ್ಮ ಜಾತ್ರಾ ಸಡಗರ | ಮಳೆಯ ನಡುವೆಯೂ ಬೆಟ್ಟ ಏರಿದ ಭಕ್ತರು |
November 1, 2024
6:15 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 31-10-2024 | ಎರಡು ದಿನ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ | ಮಳೆ ದೂರವಾಗುವ ಲಕ್ಷಣ |
October 31, 2024
1:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror