ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’

September 16, 2019
1:16 PM

ಸುಳ್ಯ:  ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.

ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror