ತುಳು ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ- ಅರ್ಜಿ ಆಹ್ವಾನ

March 6, 2020
5:53 PM

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ತುಳು ಸಾಹಿತ್ಯ – ಸಂಶೋಧನೆ, ತುಳು ಜಾನಪದ ಕ್ಷೇತ್ರ, ತುಳು ಯಕ್ಷಗಾನ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ 3 ಜನ ಗಣ್ಯರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.

Advertisement

ಈ ಸಂದರ್ಭದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಬಾಲ ಪ್ರತಿಭೆ, ಯುವ ಸಾಧಕ, ಸಂಘಟನೆ (ಬಿರ್ಸೆ ಬಾಲೆ ತಮ್ಮನ, ಬಿರ್ಸೆ ಜವನೆರೆ ತಮ್ಮನ, ಬಿರ್ಸೆ ಕೂಟ ತಮ್ಮನ) ಇವರುಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ. ಅರ್ಜಿಗಳನ್ನು ಸ್ವತ: ಅಭ್ಯರ್ಥಿಗಳೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿ ಸಲ್ಲಿಸಬಹುದು. ಹಿಂದಿನ ಸಾಲಿನಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ, ಆಯ್ಕೆ ಆಗದ ಮಹನೀಯರ ಅರ್ಜಿಗಳನ್ನು ಈ ವರ್ಷವೂ ಪರಿಗಣಿಸಲಾಗುವುದು. ಅವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಆದರೆ ಸಾಧನೆಯ ಪೂರಕ ವಿವರಗಳಿದ್ದಲ್ಲಿ ಕಳುಹಿಸಿಕೊಡಬಹುದು. ಹೊಸದಾಗಿ ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಗಳನ್ನು ಕಳುಹಿಸಬೇಕು. ಅರ್ಜಿಯನ್ನು ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಗಳೊಂದಿಗೆ ಅಕಾಡೆಮಿಗೆ ಕಳುಹಿಸಿ ಕೊಡಬಹುದು.

2019ರ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. 2019ನೇ ಜನವರಿ 1 ರಿಂದ 31 ರವರೆಗೆ ಪ್ರಕಟಗೊಂಡ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಪರಿಗಣಿಸಲು ಅವಕಾಶವಿರುತ್ತದೆ. ತುಳು ಕವನ ಸಂಕಲನ, ತುಳು ಕಥಾ ಸಂಕಲನ, ತುಳು ಕಾದಂಬರಿ, ತುಳು ಕಾವ್ಯ, ತುಳು ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ – ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಈ ಪ್ರಕಾರಗಳಲ್ಲಿ ಅಕಾಡೆಮಿಯು ಹೆಚ್ಚು ಸಂಖ್ಯೆಯಲ್ಲಿ ಸ್ವೀಕರಿಸುವ ಪುಸ್ತಕಗಳ 3 ಪ್ರಕಾರಗಳನ್ನು ಮಾತ್ರ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ 4 ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ತುಳು ಅಕಾಡೆಮಿ ಗೌರವ ಪ್ರಶಸ್ತಿ -2019” ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ – 2019 ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳುಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಅರ್ಜಿಯನ್ನು ಮಾರ್ಚ್ 30 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9901016962ನ್ನು ಸಂಪರ್ಕಿಸಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ದಯಾನಂದ ಜಿ. ಕತ್ತಲ್‍ಸಾರ್ ಇವರ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ  ಬೆಳೆ ಸಮೀಕ್ಷೆ ಕಡ್ಡಾಯ – ಕೃಷಿ ಇಲಾಖೆ
July 1, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group