ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 208 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. 118 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2715 ಸಕ್ರಿಯ ಕೇಸ್ ಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಬುಧವಾರ 5503 ಜನರಿಗೆ ಕೊರೋನಾ ದೃಢಪಟ್ಟಿದೆ. 92 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2397 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 2147 ಮಂದಿ ಸಾವನ್ನಪ್ಪಿದ್ದು, 67447 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 369 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel