ಧರ್ಮಸ್ಥಳ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ವಿಶೇಷವಾಗಿ, ವಿಭಿನ್ನವಾಗಿ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ ತಮ್ಮ ವೃತ್ತಿಯ ಘನತೆ, ಗೌರವ ಕಾಪಾಡಿಕೊಂಡಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ ಒಂದರಂದು ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಅವರು ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪ್ರಜ್ಞಾವಂತರಾಗಿ, ವಿಚಾರವಂತರಾಗಿ, ಬುದ್ಧಿವಂತರಾಗಿ ತಮ್ಮ ಸೃಜನಶೀಲ ವರದಿಗಾರಿಕೆಯಿಂದ ಓದುಗರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ತಾನು ಮೂರು ತಲೆಮಾರಿನ ಪತ್ರಕರ್ತರ ಕಾರ್ಯ ಶೈಲಿಯನ್ನು ಗಮನಿಸಿದ್ದು ಹೊಸ ತಲೆ ಮಾರಿನ ಪತ್ರಕರ್ತರು ಕೂಡಾ ಪ್ರಾಮಾಣಿಕವಾಗಿ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಜಿಲ್ಲಾ ಸಮ್ಮೇಳನಕ್ಕೆ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸ್ವಾಗತ ಸಮಿತಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಮತ್ತು ಧನಕೀರ್ತಿ ಆರಿಗ, ಧರ್ಮಸ್ಥಳ ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮೇಳನ : ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ"