ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾರ್ಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15 ರ ತನಕ ನೀಡಲು ರಾಜ್ಯ ಸರಕಾರದ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
Advertisement
ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಶಾಸಕ ಕಾಮತ್ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement