ನಿಂತಿಕಲ್ಲು : ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ದೇವರಕಾನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ"