ದೇಶದಲ್ಲಿ ಮತ್ತೆ ಬ್ಯಾಂಕ್ ಗಳ ವಿಲೀನ : 10 ಬ್ಯಾಂಕ್ ಗಳು ಒಂದಾಗಿ 4 ಬ್ಯಾಂಕ್

August 30, 2019
10:14 PM

ಹೊಸದಿಲ್ಲಿ: ದೇಶದ ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳ ವಿಲೀನಕ್ಕೆ ಮತ್ತೆ ಕೇಂದ್ರ ಸರಕಾರ ಮುಂದಾಗಿದೆ. ಸಾರ್ವಜನಿಕ ರಂಗದ 10 ಪ್ರಮುಖ ಬ್ಯಾಂಕ್ ಗಳನ್ನು 4 ಬ್ಯಾಂಕ್ ಗಳಾಗಿ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಘೋಷಿಸಿದ್ದಾರೆ.

ಪಂಜಾಬ್ ನ್ಯಾಶನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಯೂನಿಯನ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ಒಂದಾಗಲಿದೆ. ಇಂಡಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ ಎಂದು ಸುದ್ದಿಗೋಷ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 18 ರಲ್ಲಿ 14 ಸಾರ್ವಜನಿಕ ರಂಗದ ಬ್ಯಾಂಕ್ ಗಳು ಲಾಭದಲ್ಲಿವೆ. ಬ್ಯಾಂಕ್ ಆಫ್ ಬರೋಡ, ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನದಿಂದ ಭಾರೀ ಲಾಭವಾಗಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror