ದೇಶ ಬಲಿಷ್ಠಗೊಳ್ಳಬೇಕಾದರೆ ವಿದ್ಯಾರ್ಥಿಗಳು ಬಲಿಷ್ಠರಾಗಬೇಕು

June 18, 2019
11:00 AM

ಬೆಳ್ಳಾರೆ: ಭಾರತ ನಂಬರ್‍ವನ್ ದೇಶವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾಗುತ್ತದೆ. ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳು ಬಲಿಷ್ಠವಾಗಬೇಕು.ಅದಕ್ಕಾಗಿ ಸರ್ಕಾರವು ಆಂಗ್ಲಮಾಧ್ಯಮದ ಸರ್ಕಾರಿ ಶಾಲೆಗೆ ಒತ್ತು ನೀಡಲಾರಂಭಿಸಿದೆ ಎಂದು ನಗರಾಭಿವೃದ್ದಿ ಹಾಗು ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.

Advertisement
Advertisement
Advertisement

2017-18ನೇ ಸಾಲಿನ ಪರಿಶಿಷ್ಠ ಜಾತಿ ಉಪಯೋಜನೆಯಡಿ ನೂರು ಲಕ್ಷ ವೆಚ್ಛದಲ್ಲಿ ನಿರ್ಮಾಣಗೊಂಡಿರುವ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನ ಅಕ್ಷರ ದಾಸೋಹವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡತನ ದೂರ ಮಾಡಲು ಶೈಕ್ಷಣಿಕ ಕ್ಷೇತ್ರದಿಂದ ಮಾತ್ರ ಸಾಧ್ಯ ತಾಳ್ಮೆಯೂ ಯಶಸ್ಸಿನಲ್ಲಿ ದೊಡ್ಡ ಪಾತ್ರ ವಹಿಸುತ್ತದೆ ಎಂದರು.
ಸ್ಮಾರ್ಟ್ ಕ್ಲಾಸ್‍ಗಳನ್ನು ಉದ್ಘಾಟಿಸಿ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಸ್.ಅಂಗಾರರವರು ಯೋಜನೆಗಳು ಯಶಸ್ವಿಯಾಗಬೇಕಾದರೆ ಜಯದ ಮನೋಭಾವನೆ ಹೊಂದಿರಬೇಕು ಆಡಳಿತಗಾರರು ಆಳ್ವಿಕೆ ವೇಳೆಯಲ್ಲಿ ಎಚ್ಚರಿಕೆಯಿಂದಿರುವುದು ಮುಖ್ಯ ಸರ್ಕಾರದ ಇಲಾಖೆ ಅನುದಾನ ಒದಗಿಸುವ ಸಂದರ್ಭದಲ್ಲಿ ನಿರ್ದಿಷ್ಠ ಸ್ಥಳದ ಅಧ್ಯಯನ ನಡೆಸಬೇಕು ಎಂದರು. ಆಂಗ್ಲ ಮಾಧ್ಯಮದ ಒಂದನೆ ತರಗತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಹಾಗು ಯು.ಕೆ.ಜಿಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಟಿಸಿದರು. ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ ಹಾಗು ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ಶಕುಂತಳಾ ನಾಗರಾಜ್ ಶುಭಹಾರೈಸಿದರು.

Advertisement

ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚಿದ ಐವರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಬೆಳ್ಳಾರೆ ಗ್ರಾ.ಪಂ ಉಪಾಧ್ಯಕ್ಷ ಮುಸ್ತಾಫಾ, ಸದಸ್ಯ ಆರಿಫ್ ಬೆಳ್ಳಾರೆ, ಪೆರುವಾಜೆ ಗ್ರಾ.ಪಂ ಅಧ್ಯಕ್ಷೆ ಅನುಸೂಯ, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಳದ ಆಡಳಿತ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಾಜೀವಿ ಆರ್ ರೈ, ಪ್ರೌಢ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಬಾಳಪ್ಪ. ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೇಶವ ನಾಯ್ಕ್, ನಿವೃತ್ತ ಪ್ರಾಂಶುಪಾಲ ಯು.ಸುಬ್ರಾಯ ಗೌಡ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಉಮಕುಮಾರಿ ಹಾಗು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಜಾನಕಿ ಉಪಸ್ಥಿತರಿದ್ದರು.

Advertisement

ಶಿಕ್ಷಕ ರಾಮಚಂದ್ರ ಭಟ್ ಸ್ವಾಗತಿಸಿ, ವಂದಿಸಿದರು. ಪ್ರಭಾರ ಪ್ರಾಂಶುಪಾಲೆ ಹಸೀನಾ ಬಾನು ಪ್ರಸ್ತಾವನೆಗೈದರು. ಮಮತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್
October 3, 2024
12:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror