ದ ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ 22 ಕೊರೊನಾ ಪಾಸಿಟಿವ್ ಪತ್ತೆ |

April 30, 2020
12:40 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ  ಗುರುವಾರ ಒಂದೇ ದಿನ 22 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ  ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ. ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿತ್ತು. ಕೊರೊನಾ ದೃಢವಾದ ಹಿನ್ನಲೆಯಲ್ಲಿ ಇದೀಗ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1,718 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಬಲಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror