ದ ಕ ಜಿಲ್ಲೆಯಲ್ಲಿ ಶುಕ್ರವಾರ ನೆಮ್ಮದಿ | ಉಡುಪಿ ಜಿಲ್ಲೆ ಕೊರೊನಾ ಮುಕ್ತ | ಕಾಸರಗೋಡಿನಲ್ಲಿ 3 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಒಂದೇ ದಿನ 29 ಪ್ರಕರಣ ಪತ್ತೆ |

April 24, 2020
7:59 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಉಡುಪಿ ಜಿಲ್ಲೆಯು ಇಂದು ಕೊರೊನಾ ವೈರಸ್ ಮುಕ್ತ ಜಿಲ್ಲೆಯಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ  ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಕರ್ನಾಟಕದಲ್ಲಿ ಒಂದೇ ದಿನ 29 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆಯವರೆಗೆ ಯಾವುದೇ ಕೊರೊನಾ ಪಾಸಿಟಿವ್ ವರದಿಗಳು ಪತ್ತೆಯಾಗಿಲ್ಲ.

Advertisement

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಮಹಿಳೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ಈ ಮೂಲಕ ಕೊರೊನಾ ಮುಕ್ತ ಜಿಲ್ಲೆಯಾಗಿದೆ.ಕೊರೊನಾ ಸೋಂಕಿತೆ ಗರ್ಭಿಣಿಯ ಪತಿಯು ಗಲ್ಫ್ ದೇಶದಿಂದ ಮರಳಿದ್ದು ಪತ್ನಿಗೆ ಸೋಂಕು ತಗುಲಿತ್ತು. ಸೋಂಕಿತೆ ಗರ್ಭಿಣಿಯಾದ ಕಾರಣದಿಂದಾಗಿ ಈ ಪ್ರಕರಣದ ಮೇಲೆ ಹೆಚ್ಚಿನ ನಿಗಾ ವಹಿಸಿ ಉಡುಪಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  ಶುಕ್ರವಾರ ಒಂದೇ ದಿನ ಬರೋಬ್ಬರಿ 29 ಮಂದಿಯಲ್ಲಿ  ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿಯೇ 19 ಮಂದಿಗೆ ಕೊರೊನಾ ಸೋಂಕು  ದೃಢಪಟ್ಟಿದೆ. ಸಂಜೆಯ ವೇಳೆಗೆ ರಾಜ್ಯದ ಎಲ್ಲಾ ಪ್ರಕರಣಗಳು ಸೇರಿ ಒಟ್ಟು 29 ಮಂದಿಯಲ್ಲಿ  ಕೊರೊನಾ ಪಾಸಿಟಿವ್ ಕಂಡುಬಂದಿದೆ.  ಇದುವರೆಗೆ 18 ಜನರು ಮೃತಪಟ್ಟಿದ್ದು, 145 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ  ತಿಳಿಸಲಾಗಿದೆ.

Advertisement

ಕಾಸರಗೋಡು ಜಿಲ್ಲೆಯಲ್ಲಿ  ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ.ಇಡೀ ಕೇರಳದಲ್ಲಿ ಒಟ್ಟು 3 ಪ್ರಕರಣ ಮಾತ್ರಾ ಕಂಡುಬಂದಿದೆ. ಈ ಮೂಲಕ ಕೇರಳದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 450 ಕ್ಕೆ ಏರಿಕೆಯಾಗಿದೆ. ಒಟ್ಟು 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror