ದ ಕ ಜಿಲ್ಲೆಯಲ್ಲಿ 14 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಒಟ್ಟು 141 ಕೊರೊನಾ ಪಾಸಿಟಿವ್ |

May 30, 2020
7:04 PM

ಮಂಗಳೂರು: ದ ಕ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ. 

ದ ಕ ಜಿಲ್ಲೆಯ 14 ಪ್ರಕರಣಗಳಲ್ಲಿ  13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ 17 ವರ್ಷದ ಬಾಲಕನಲ್ಲಿ  ಪತ್ತೆಯಾಗಿದೆ. ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲು ಪ್ರದೇಶದ 17 ವರ್ಷದ ಬಾಲಕನಲ್ಲಿ  ಕೊರೊನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. 

ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವ್  ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ರಾಜ್ಯದಲ್ಲಿ 141 ಹೊಸ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 90 ಜನ ಬೇರೆ ರಾಜ್ಯಗಳ ಪ್ರಯಾಣಿಕರಿದ್ದಾರೆ.  ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿವ್ ಪ್ರಕಾರ  103 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 997 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು 33 ಪ್ರಕರಣಗಳು, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6 ಪ್ರಕರಣಗಳು ದಾಖಲಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror