ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.
339 ಕ್ಯಾನ್‍ಗಳಲ್ಲಿ ತಲಾ 20 ಲೀಟರ್‍ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು. ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಧರ್ಮಸ್ಥಳಕ್ಕೆ ಭಕ್ತಾದಿಗಳಿಂದ ಕುಡಿಯುವ ನೀರು ಸರಬರಾಜು"