ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Advertisement

ಧರ್ಮಸ್ಥಳ :ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ  ಸ್ವಚ್ಛತಾ ಅಭಿಯಾನ ಶುಕ್ರವಾರ ಬೆಳಗ್ಗೆ ನಡೆಯಿತು.

Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯತ್ , ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು  ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ ಸಾಗಿಸಲಾಯಿತು.

Advertisement
Advertisement

 

Advertisement

Advertisement

 

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸ್ವಚ್ಛತೆ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿದ್ದು ದೇಶದಲ್ಲಿ ಶೇ. 50 ರಷ್ಟು ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲಿಯೂ ಈ ಭಾವನೆ ಮೂಡಿ ಬರಬೇಕು ಎಂದು ಅವರು ಹಾರೈಸಿದರು.ಊರಿನವರು ಮತ್ತು ಧರ್ಮಸ್ಥಳದ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿರುವುದು ಸಂತೋಷವಾಗಿದೆ ಎಂದರು.

Advertisement
Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ"

Leave a comment

Your email address will not be published.


*