ಧರ್ಮಸ್ಥಳದಲ್ಲಿ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ಬಹುಮಾನ ವಿತರಣೆ

May 6, 2019
7:30 AM

ಧರ್ಮಸ್ಥಳ :ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಲಾದ 17 ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಿತು.

Advertisement

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಿಸಿ ಮಾತನಾಡಿದ ಚಿತ್ರಕಲಾವಿದ ಮುಖ್ಯಮಂತ್ರಿಚಂದ್ರು, ಕಲೆಗೆ ಜಾತಿ-ಮತ, ಬಡವ-ಬಲ್ಲಿದನೆಂಬ ಬೇಧವಿಲ್ಲ. ಕಲೆಯಿಂದ ಮನಸ್ಸಿಗೆ ಸಂತಾಸದಾಯಕವಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಸರ್ವರಿಗೂ ಸಮಪಾಲು, ಸಮಬಾಳು ತತ್ವದ ನೆಲೆಯಲ್ಲಿ ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.

ಶುಭಾಶಂಸನೆ ಮಾಡಿದ ಗಂಜಿಫಾ ರಘುಪತಿ ಭಟ್, ಧರ್ಮಸ್ಥಳವು ನಮ್ಮಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಪಾವನ ಕ್ಷೇತ್ರವಾಗಿದೆಎಂದು ಹೇಳಿದರು.ವಿದೇಶೀ ಶೈಲಿಯ ಕಲೆಗಳ ವ್ಯಾಮೋಹದಿಂದ ದೇಶೀಯ ಚಿತ್ರಕಲೆ ವಿನಾಶದಂಚಿನಲ್ಲಿದೆಎಂದುಅವರು ವಿಷಾದ ವ್ಯಕ್ತಪಡಿಸಿದರು.


ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಲೆಗೆ ಅದ್ಭುತ ಶಕ್ತಿ ಇದ್ದುಕಲೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಹಾಗೂ ತೃಪ್ತಿ ಸಿಗುತ್ತದೆ.ಸೃಜನಾತ್ಮಕ ಕಲೆ ಹಾಗೂ ವಾಸ್ತವಿಕ ಕಲೆಯಿಂದ ನಮ್ಮಲ್ಲಿ ಸಜ್ಜನಿಕೆ ಮತ್ತುಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದರು.

ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಶಾಂತಿವನಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.

Advertisement

ಯೋಗ ನಿರ್ದೇಶಕ ಶಶಿಕಾಂತ್ ಜೈನ್ ಸ್ವಾಗತಿಸಿದರು.ಮೂಡಬಿದ್ರೆ ಪ್ರಾಂತ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ಬಾಲಕೃಷ್ಣ ಧನ್ಯವಾದವಿತ್ತರು.ಬಂಟ್ವಾಳದ ಸದಾಶಿವ ನಾಯಕ್‍ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group