ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ಶುಕ್ರವಾರ ಪ್ರಾರಂಭವಾದ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಉಜಿರೆಯಲ್ಲಿರುವ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದರು.
ಬೆಳ್ತಂಗಡಿ ತಾಲೂಕಿನ ವಿವಿಧ ಊರುಗಳಿಂದ ಬಂದ ಭಕ್ತರು ಹಾಗೂ ಅಭಿಮಾನಿಗಳು ಉಜಿರೆಯಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸೇರಿ ಅಲ್ಲಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದರು. ಉಜಿರೆಯಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ದೀಪ ಬೆಳಗಿಸಿ, ಪಾದಯಾತ್ರೆಗೆ ಚಾಲನೆ ನೀಡಿದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್‍ಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು.
ಶಿವ ಪಂಚಾಕ್ಷರಿ ಪಠಣ, ಭಜನೆ, ಭಕ್ತಿಗೀತೆ, ದೇವರ ನಾಮ ಸ್ಮರಣೆ ಮಾಡುತ್ತಾ ಶ್ರದ್ಧಾ-ಭಕ್ತಿಯಿಂದ ಉಜಿರೆಯಿಂದ ಧರ್ಮಸ್ಥಳಕ್ಕೆ ಭಕ್ತರು ಒಂಬತ್ತು ಕಿ.ಮೀ. ಪಾದಯಾತ್ರೆ ಮಾಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel