ಧಾರ್ಮಿಕ ಭಾವನೆಗೆ ಧಕ್ಕೆ | ವಿಹಿಂಪ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ ಕಲಾವಿದ ಅರವಿಂದ ಬೋಳಾರ್

August 11, 2020
10:05 PM

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್  ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್‌ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ  ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್‌ಪಿ ಕಚೇರಿಗೆ  ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು  ತಿಳಿಸಿದ್ದಾರೆ.

ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್‌ ಠಾಣೆಯಲ್ಲಿ  ದೂರು ನೀಡಲಾಗಿತ್ತು. ಈ ಸಂದರ್ಭ  ವಿಎಚ್‌ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್‌ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು  ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror