ನರೇಂದ್ರ ಪ.ಪೂ. ಕಾಲೇಜು ವತಿಯಿಂದ ಕುರಿಯ ಗ್ರಾಮದಲ್ಲಿ ವೃಕ್ಷಾರೋಪಣ

August 4, 2019
4:00 PM

ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಗಿಡನೆಡುವ ಉತ್ಸಾಹವು ಹಿರಿಯರಾದ ನಮಗೆ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಪ್ರೇರಣೆಯಾಗಿದೆ ಎಂದು ಗ್ರಾಮ  ಪಂಚಾಯತ್ ಸದಸ್ಯರಾದ  ರೇಖನಾಥ್ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದ ಗ್ರಾಮ ವಿಕಾಸ ಯೋಜನೆಯಲ್ಲಿ ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದ ಸುಮಾರು 50 ಮನೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವೃಕ್ಷಾರೋಪಣ 2019 ಎಂಬ ವಿಶಿಷ್ಟ ಕಲ್ಪನೆಯಲ್ಲಿ ಸಾಕಾರಗೊಂಡ ಈ ವನಮಹೋತ್ಸವ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯನ್ನಲ್ಲದೆ ಸಮಾಜ ದರ್ಶನದ ಅನುಭವವನ್ನೂ ನೀಡಿತು.

ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಸದಸ್ಯರಾದ  ಶಿವರಂಜನ್, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರೂಪಲೇಖ, ಸಂಚಾಲಕರಾದ ವಿಜಯಕೃಷ್ಣ ಭಟ್ , ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ , ಗ್ರಾಮಸ್ಥರಾದ ಯಶವಂತ್, ಅಭಿಷೇಕ್, ಚಂದ್ರಪ್ರಕಾಶ್, ಚಂದ್ರಹಾಸ ರೈ ಡಿಂಬ್ರಿ, ಪುರಂದರ, ಸಂಯೋಜಕ ಉಪನ್ಯಾಸಕರಾದ ವಿಘ್ನೇಶ ವೈ , ಹಾಗೂ ಉಪನ್ಯಾಸಕರು , ವಿದ್ಯಾರ್ಥಿಗಳು ಸಹಕರಿಸಿದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror