ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.5 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು ಗೆಲುವಿನತ್ತ ಸಾಗಿದ್ದಾರೆ. ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರು 656170 ಮತಗಳು ಹಾಗೂ ಕಾಂಗ್ರೆಸ್ ಮಿಥುನ್ ಕುಮಾರ್ ರೈ ಅವರು 405504 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಈಗ 2.5 ಲಕ್ಷಕ್ಕೂ ಅಧಿಕ ಮತಗಳ ಅಂತರವನ್ನು ಹೊಂದಿದ್ದಾರೆ. ಬಿ ಜೆ ಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಎರಡೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನತ್ತ ನಳಿನ್ ಕುಮಾರ್ ಕಟೀಲು : ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ"