ನೆರೆ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀರಾಮಚಂದ್ರಾಪುರ ಮಠ

August 13, 2019
5:31 PM

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು- ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠ  ಪ್ರಕಟಿಸಿದೆ.

Advertisement
Advertisement
Advertisement

ಬೆಳ್ತಂಗಡಿ ತಾಲೂಕಿನ ಬಂದಾರು- ಮೊಗ್ರು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ತೂಗುಸೇತುವೆ ಪ್ರವಾಹಕ್ಕೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈ ಗ್ರಾಮಗಳ ಹತ್ತಾರು ಮಕ್ಕಳು ಶಾಲೆಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಸಂತ್ರಸ್ತ ಮಕ್ಕಳ ಅಸಹಾಯಕ ಸ್ಥಿತಿಗೆ ಸ್ಪಂದಿಸಿದ ಶ್ರೀಮಠ ತಕ್ಷಣದಿಂದಲೇ ಉಭಯ ಗ್ರಾಮಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ.

Advertisement

 

Advertisement

ನೇತ್ರಾವತಿ ನದಿಗೆ ಮುಗೇರಡ್ಕ ಎಂಬಲ್ಲಿ ಅಡ್ಡಲಾಗಿ ಕಟ್ಟಿದ್ದ ತೂಗುಸೇತುವೆ ಈ ತಿಂಗಳ 8 ರಂದು  ಶ್ರೀಮಠದ ಅಂಗಸಂಸ್ಥೆಯಾದ ಉರುವಾಲಿನ ಶ್ರೀಭಾರತೀ ವಿದ್ಯಾಸಂಸ್ಥೆಯಲ್ಲಿ ಈ ಗ್ರಾಮಗಳ ಮಕ್ಕಳಿಗೆ ಉಚಿತವಾಗಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್ ಪ್ರಕಟಿಸಿದ್ದಾರೆ.

ಈಗಾಗಲೇ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೀಡಾಗಿರುವ ಶಿವಯೋಗ ಮಂದಿರದ ಗೋವುಗಳಿಗೆ ಒಂದು ಲೋಡ್ ಮೇವನ್ನು ಶ್ರೀಮಠದ ವತಿಯಿಂದ ವಿತರಿಸಲಾಗಿದ್ದು, ಹಾನಗಲ್ ಮಠದ ಗೋಶಾಲೆಗೆ ಒಂದು ಲೋಡ್ ಮೇವು ವಿತರಿಸಲಾಗಿದೆ. ಶಿವಯೋಗ ಮಂದಿರಕ್ಕೆ ಸಿಂಧನೂರಿನಿಂದ ಎರಡು ಲೋಡ್ ಹಾಗೂ ದಾವಣಗೆರೆಯಿಂದ ಒಂದು ಲೋಡ್ ಮೇವನ್ನು ಗೋ ಪರಿವಾರ ವತಿಯಿಂದ ವಿತರಿಸಲಾಗಿದೆ.  ಶ್ರೀಮಠದ ನೂರಾರು ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶ್ರೀಮಠದ ಸೇವಾ ವಿಭಾಗದ ವತಿಯಿಂದ ಸಂತ್ರಸ್ತರಿಗೆ ಜೀವನಾವಶ್ಯಕ ಸಾಮಗ್ರಿಗಳನ್ನು ಪೂರೈಸಲಾಗಿದೆ. ಈಗಾಗಲೇ ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ನೆರೆ ಸಂತ್ರಸ್ತರಿಗೆ ಊಟೋಪಚಾರ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror