ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಬಳಿಯ ಕೊಕ್ಕಡದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 5 ಜನ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ನೆಲ್ಯಾಡಿ ಕಡೆಯಿಂದ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿದೆ.ಎರಡೂ ಕಾರುಗಳು ವೇಗದಲ್ಲಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ನಡುವೆ ಜೊತೆಯಲ್ಲೇ ಸಾಗುತ್ತಿದ್ದ ಅಂಬುಲೆನ್ಸ್ ಕೂಡಾ ಪಲ್ಟಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಹೆದ್ದಾರಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನೆಲ್ಯಾಡಿ ಬಳಿ ಕಾರುಗಳ ಡಿಕ್ಕಿ : 5 ಜನರಿಗೆ ಗಾಯ"