ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

August 24, 2019
12:15 PM

ಸುಳ್ಯ:ಭಾರತದಲ್ಲಿ ಜನರು ತಮ್ಮ ತಮ್ಮ ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ  ಹರಿಣಿ ಪುತ್ತೂರಾಯ ಅವರು ನುಡಿದರು.

ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಯಾವುದೇ ಜಾತಿ, ಧರ್ಮ, ಮತ ಎಂಬ ಬೇಧಭಾವ ಇಲ್ಲದೆ ಒಟ್ಟಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು, ದೇಶದ ಸಂವಿಧಾನ ಮತ್ತು ಕಾನೂನುಗಳನ್ನು ಗೌರವಿಸುತ್ತಾ , ಸೌಹಾರ್ದತೆಯಿಂದ ಬಾಳಿದಾಗ ಸದೃಢ ಭಾರತ ನಮ್ಮದಾಗುತ್ತದೆ ಎಂದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪ್ರಾಂಶುಪಾಲರು ಬೋಧಿಸಿದರು.

ಕಾಲೇಜಿನ ಉಪನ್ಯಾಸಕ ವೃಂದವರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror