ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಾಗಾರ

ಸುಳ್ಯ: ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ ಎಂದು  ವಿವೇಕಾನಂದ ಕಾಲೇಜಿನ  ವಿಶ್ರಾಂತ ಪ್ರಾಂಶುಪಾಲರು   ಡಾ। ಮಾಧವ ಭಟ್ ಅವರು ಹೇಳಿದರು.

Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ  ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ   ಜಗದೀಶ್ ಅಡ್ತಲೆ  , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ। ಬಾಲಚಂದ್ರ ಗೌಡ  ಎಂ ಅವರು ಶುಭ ಹಾರೈಸಿದರು .

Advertisement

ಸಮಾರಂಭದ ವೇದಿಕೆಯಲ್ಲಿ  ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ। ಗಿರಿಧರ ಗೌಡ , ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಉದಯ ಕೃಷ್ಣ  ಬಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು.

ಆರಂಭದಲ್ಲಿ ಉಪನ್ಯಾಸಕಿ  ರಾಜೇಶ್ವರಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.

Advertisement

ಬಳಿಕ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುವ ಮೂಲಕ ತರಬೇತಿಯನ್ನು ಸಂಪನ್ಮೂಲ ವ್ಯಕಿಗಳಾದ ಡಾ। ಮಾಧವ ಭಟ್ ಅವರು ನಡೆಸಿಕೊಟ್ಟರು.  ಈ ತರಭೇತಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಕೆವಿಜಿ ಕಾನೂನು ಮಹಾವಿದ್ಯಾಲಯದ  ಉಪನ್ಯಾಸಕರು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಾಗಾರ"

Leave a comment

Your email address will not be published.


*