ನ.ಪಂ.ಚುನಾವಣಾ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ – ರಮಾನಾಥ ರೈ ಕಿವಿಮಾತು

Advertisement

ಸುಳ್ಯ : ಮೂರು ಬಾರಿ ನ.ಪಂ.ಆಡಳಿತ ನಡೆಸಿದರೂ ನಗರದ ಅಭಿವೃದ್ದಿ ನಡೆಸಲು ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಆಡಳಿತದ ವಿರುದ್ಧ ಇರುವ ಅಲೆಯಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಲಾಭ ಆಗಲಿದೆ. ಆದುದರಿಂದ ನಗರ ಪಂಚಾಯತ್ ಚುನಾವಣೆಯಲ್ಲಿ ಗೆಲುವಿಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನಗರ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಟಿ.ಎಂ.ಶಹೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಧನಂಜಯ ಅಡ್ಪಂಗಾಯ, ಕೆ.ಪಿ.ಥಾಮಸ್, ರಾಜೀವಿ ಆರ್.ರೈ, ಪಿ.ಪಿ.ವರ್ಗೀಸ್, ಎಸ್.ಸಂಶುದ್ದೀನ್, ಪಿ.ಎ.ಮಹಮ್ಮದ್, ಸರ್ವೋತ್ತಮ ಗೌಡ, ಡಾ.ಬಿ.ರಘು, ಪಿ.ಎಸ್.ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ನಗರ ಪಂಚಯತ್ ಚುನಾವಣೆ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಯಿತು

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ನ.ಪಂ.ಚುನಾವಣಾ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ – ರಮಾನಾಥ ರೈ ಕಿವಿಮಾತು"

Leave a comment

Your email address will not be published.


*