ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಲ್ಕು ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ , ಘೋಷಣೆ ಮಾತ್ರಾ ಬಾಕಿ ಎಂದು ತಿಳಿದು ಬಂದಿದೆ.
ಕೆರೆಮೂಲೆ ವಾರ್ಡ್ ನಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗು ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಬೋರುಗುಡ್ಡೆ ವಾರ್ಡ್ ನಲ್ಲಿ ಮಾಜಿ ಸದಸ್ಯ ಕೆ.ಎಂ.ಮುಸ್ತಫಾ, ನಾವೂರು ವಾರ್ಡ್ ನಲ್ಲಿ ಮಹಮ್ಮದ್ ಶರೀಫ್ ಕಂಠಿ ಅಭ್ಯರ್ಥಿಗಳಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್ ಮತ್ತು ರಿಯಾಝ್ ಕಟ್ಟೆಕ್ಕಾರ್ ಹೆಸರು ಸಂಭಾವ್ಯರ ಪಟ್ಟಿಯಲ್ಲಿದ್ದು ಕುತೂಹಲ ಕಾಯ್ದಿರಿಸಿದೆ. ಸಂಜೆಯ ವೇಳೆಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ : ಕಾಂಗ್ರೆಸ್ ಪಟ್ಟಿ ಬಹತೇಕ ಅಂತಿಮ- ಅಧಿಕೃತ ಘೋಷಣೆ ಬಾಕಿ"