ಸುಳ್ಯ: ಕಾನತ್ತಿಲ 20ನೇ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ಆರ್.ರೈ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಮಾಜಿ ಸದಸ್ಯ ರಮಾನಂದ ರೈ ಅವರ ಪತ್ನಿ ಜಯಂತಿ ರೈ ಅವರ ಹೆಸರು ಬಿಜೆಪಿ ಆಕಾಂಕ್ಷಿತರ ಪಟ್ಟಿಯಲ್ಲಿತ್ತು. ಆದರೆ ಪಕ್ಷದ ಟಿಕೆಟ್ ದೊರೆಯದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಹೊಸ ಮುಖಗಳಿಗೆ ಅವಕಾಶ ಎಂದು ಹೇಳಿ ಬಿಜೆಪಿ 20ನೇ ವಾರ್ಡ್ ನಲ್ಲಿ ಹಳೆಯ ಸದಸ್ಯರಿಗೆ ಸೀಟ್ ನೀಡಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಆದುದರಿಂದ ಈ ವಾರ್ಡ್ ನಲ್ಲಿಯೂ ಹೊಸ ಅಭ್ಯರ್ಥಿಯೇ ಬರಲಿ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಮಾನಂದ ರೈ ಪ್ರತಿಕ್ರಿಯಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ BREAKING : ಬಿಜೆಪಿ ಟಿಕೆಟ್ ಆಕಾಂಕ್ಷಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ"