ಪಂಜದಲ್ಲಿ ಅಡಿಕೆ ಕೌಶಲ್ಯ ಸ್ವ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ

ಪಂಜ: “ಕೃಷಿ ಉಳಿವಿಗಾಗಿ ಕೃಷಿಕರ ಮನೋಭಾವನೆಗಳು ಬದಲಾವಣೆಯಾಗಬೇಕು. ಯುವ ಜನರು ಸುರಕ್ಷಿತ ರೀತಿಯ ಕೃಷಿ ಚಟುವಟಿಕೆ ನಡೆಸಲು ಇಂತಹ ತರಬೇತಿಗಳಲ್ಲಿ ತರಬೇತಿ ಪಡೆದು ಕೃಷಿಗೆ ಉತ್ತಮ ಭವಿಷ್ಯ ನೀಡ ಬೇಕಾಗಿದೆ” ಎಂದು ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಪಡ್ರೆ ಹೇಳಿದರು.

Advertisement

ಅವರು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕಡಬ ಪ್ರಾಥಮಿಕ ಸಹಕಾರ ಸಂಘ ,ಜೇಸಿಐ ಪಂಜ ಪಂಚಶ್ರೀ ಮತ್ತು ಲಯನ್ಸ್ ಕ್ಲಬ್ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಅಡಿಕೆ ಕೌಶಲ್ಯ ಸ್ವ ಉದ್ಯೋಗ ತರಬೇತಿ ಶಿಬಿದಲ್ಲಿ ಮಾತನಾಡಿದರು.  ನಗರದ ಉದ್ಯೋಗಕ್ಕೆ ಹೋಗಿರುವ ಯುವಕರು ಅಲ್ಲಿಯ ಜಂಜಾಟಗಳ ಬಿಟ್ಟು ಹಳ್ಳಿ ಕಡೆ ಉದ್ಯೋಗಕ್ಕೆ ನೋಡುತ್ತಿದ್ದಾರೆ. ಈ ಸಂದರ್ಭ ಅವರಿಗೆ ಉತ್ತಮ ಕೃಷಿಯ ಸುಸಜ್ಜಿತ ತರಬೇತಿಗಳನ್ನು ನೀಡಿ ಉದ್ಯೋಗ ನೀಡಿಡುವಂತಾಗ ಬೇಕು.ಕೃಷಿ ಕಾರ್ಮಿಕರು ಪದವಿಯನ್ನು ಪಡೆದ ಸಾಫ್ಟ್ ವೇರ್ ಉದ್ಯೋಗಿಗಳಷ್ಟೇ ಆದಾಯ ಗಳಿಸಲು ಸಾಧ್ಯವಿದೆ.  ದೇಹಕ್ಕೆ ಉತ್ತಮ ವ್ಯಾಯಮ ಮತ್ತು ನೆಮ್ಮದಿಯಿದೆ ಎಂದು ಹೇಳಿದರು
ಕಾರ್ಯಕ್ರಮವನ್ನು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಉದ್ಘಾಟಿಸಿದರು.  ಕೃಷಿಕ ಹಾಗೂ ಪಂಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಆನಂದ ಗೌಡ ಸಭಾಧ್ಯಕ್ಷತೆ ವಹಿಸಿದ್ದರು. ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ,ಗುತ್ತಿಗಾರು ಪ್ರಾ.ಕೃ.ಪ.ಸ ಸಂದ ಅಧ್ಯಕ್ಷ ಕೇಶವ ಭಟ್ ,ಕಡಬ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ,ಪಂಜ ಲಯನ್ಸ್ ಕ್ಲಬ್ ಕೋಶಾಧ್ಯಕ್ಷ ಚೀನಪ ಕಾಣಿಕೆ, ಪಂಜ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ,ಗುತ್ತಿಗಾರು ಪ್ರಾ.ಕೃ.ಪ.ಸ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ,ಕಡಬ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಚಾಕೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಗೀತಾಸುಧಾ ತೋಟ ಪ್ರಾರ್ಥಿಸಿದರು.ಚಂದ್ರಶೇಖರ ಶಾಸ್ತ್ರಿ ಸ್ವಾಗತಿಸಿದರು. ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು.ಶರತ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ಪಂಜದಲ್ಲಿ ಅಡಿಕೆ ಕೌಶಲ್ಯ ಸ್ವ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ"

Leave a comment

Your email address will not be published.


*