ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ

September 21, 2019
6:22 PM

ಮಂಗಳೂರು: ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರ ಅಭಿವೃದ್ಧಿಯ ಜತೆಗೆ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಬೇಕು. ನಗರದ ಕೆಲವು ವಾರ್ಡ್‌ಗಳಲ್ಲಿ ಶೇ.10ರಷ್ಟು ಹಸಿರೀಕರಣವಿಲ್ಲದಿರುವುದು ನಿಜಕ್ಕೂ ಭವಿಷ್ಯ ದೃಷ್ಟಿಯಿಂದ ಆತಂಕಕಾರಿ. ಪರಿಸರ ಸಂರಕ್ಷಿಸಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

Advertisement

ದ.ಕ. ಜಿಲ್ಲಾ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶನಿವಾರ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಪರಿಸರ ಇಲಾಖೆ ಬಹಳಷ್ಟು ಕೆಲಸ ಮಾಡುತ್ತಿದ್ದು, ಪತ್ರಕರ್ತರ ಸಂಘವೂ ಸಾಥ್ ನೀಡುತ್ತಿರುವುದು ಖುಷಿಯ ವಿಚಾರ. ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ 10ಸಾವಿರ ಗಿಡ ನೆಡುವ ಕಾರ್ಯಕ್ರಮ ಈಗಾಗಲೇ ನಡೆದಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಈ ರೀತಿಯ ಕಾರ್ಯಕ್ರಮ ಆಗಬೇಕಿದೆ. ಪ್ರಕೃತಿ ವಿಕೋಪವನ್ನು ತಡೆಯಬೇಕಾದರೆ ಪ್ರಕೃತಿ ರಕ್ಷಣೆಯಾಗಬೇಕಿದೆ. ನಮ್ಮ ಹಿರಿಯರಿಂದ ಬಳುವಳಿಯಾದ ಈ ಪರಿಸರವನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಕೊಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಮಾತನಾಡಿ ಅರಣ್ಯ ಇಲಾಖೆಯಿಂದ ಗಿಡ ವಿತರಣೆ ಮಾಡುವುದು, ನೆಡುವುದು ಮುಖ್ಯ ಅಲ್ಲ. ಅದನ್ನು ಪೋಷಿಸುವ ಕೆಲಸವನ್ನು ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದಾಗ ಪರಿಸರ ಸಂರಕ್ಷಣೆ ಸಾಧ್ಯ. ಈಗಾಗಲೇ ಪರಿಸರ ಪ್ರಿಯರು, ಅರಣ್ಯ ಇಲಾಖೆ ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಮಾಡುತ್ತಿದ್ದು, ಸೆ.24ರಂದು ಬೆಳಗ್ಗೆ 9.30ಕ್ಕೆ ಪುರಭವನದಲ್ಲಿ ವೃಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಹೆಚ್.ಆರ್. ನಾಯ್ಕ, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಮಹೇಶ್ ಕುಮಾರ್, ಪರಿಸರವಾದಿ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪತ್ರಕರ್ತ ಜಿತೇಂದ್ರ ಕುಂದೇಶ್ವರ್ ನಿರೂಪಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group