ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ

January 31, 2020
10:29 PM

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಪ್ರಬಲ ಅಂಗವಾಗಿ ಬೆಳೆಯಬೇಕಾದರೆ ಪತ್ರಕರ್ತರು ಸಮಾಜದ ಒರೆಕೊರೆಗಳನ್ನು ತಿದ್ದಲು ಹೆಚ್ಚು ಗಮನಹರಿಸಬೇಕು. ಪತ್ರಕರ್ತ ಕೆಲಸದ ಕ್ಷೇತ್ರ ಪಾರದರ್ಶಕವಾಗಿ ಮಾಧ್ಯಮ ಕ್ಷೇತ್ರ ಇನ್ನಷ್ಟು ಪರಿಪಕ್ವವಾಗಿ ಬೆಳೆಯಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಕೋಟ ಹೇಳಿದರು.

Advertisement

ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ದ. ಕ. ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯ ದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾರ್ಚ್ 7 ಹಾಗೂ 8ರಂದು ನಡೆಯಲಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸಿ ಮಾತನಾಡಿದರು.

ವಿಧಾನಸಭೆ ಹಾಗೂ ರಾಜ್ಯ ಸಭಾ ಸದನದಲ್ಲಿ ನಾವು‌ ಮಾಧ್ಯಮ ಇರುವಾಗ ಎಚ್ಚರಿಕೆಯಿಂದ ಇರುತ್ತೇವೆ. ಮಾಧ್ಯಮ ಪ್ರಜಾ ಪ್ರಭುತ್ವದಲ್ಲಿ ನಾಲ್ಕನೆ ಅಂಗವಾಗಿದ್ದು ಸಾಮಾಜಿಕ ಜವಾಬ್ದಾರಿಯನ್ನು ಹೊಂದಿದೆ. ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ಮಾಧ್ಯಮ ಕಾರ್ಯಚರಿಸಿ ಜನರ ಪ್ರಶಂಸೆಗೆ ಪಾತ್ರವಾಗಲಿ. ನಿಷ್ಪಕ್ಷಪಾತ ವಿಚಾರಗಳನ್ನು ಪ್ರಕಟಿಸಲಿ. ಪತ್ರಕರ್ತರ ರಾಜ್ಯ ಸಮ್ಮೇಳನ ಯಶಸ್ವಿಯಾಗಲಿ. ಪೂರ್ಣ ಸಹಕಾರ ನೀಡಲಾಗುವುದು ಎಂದರು.

ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಈ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಸಭೆ ಸಂಘಟಿಸಿ ರಾಜ್ಯ ಸಮ್ಮೇಳನಕ್ಕೆ ಸಿದ್ದತೆ ನಡೆಸಲಾಗಿದೆ. ಜಿಲ್ಲಾಡಳಿತದಿಂದ ಉತ್ತಮ ಸಹಕಾರ ಸಿಕ್ಕಿದೆ.‌ ಮುಂದೆಯೂ ಸಮ್ಮೇಳನದ ಪೂರ್ಣ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು. ರಾಜ್ಯ ಸಮ್ಮೇಳನ ಹೊಸ ಸಂದೇಶ ನೀಡಲಿ‌‌‌‌‌‌‌ ಎಂದು ಹೇಳಿದರು .

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಗ್ರೀನ್ ಮಂಗಳೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಶಾಸಕರಾದ ಯು ಟಿ ಖಾದರ್, ವೇದವ್ಯಾಸ ಕಾಮತ್, ಡಾ ಭರತ್ ಶೆಟ್ಟಿ , ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ , ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು . ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪತ್ರಕರ್ತ ಪುಪ್ಪರಾಜ್ ಕಾರ್ಯಕ್ರಮ ನಿರೂಪಿಸಿದರು. ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group