ಪತ್ರಿಕಾ ದಿನಾಚರಣೆ-ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ | ಬದಲಾವಣೆಗಳು ಸಂಭವಿಸಿದರೂ ಪತ್ರಿಕೋದ್ಯಮದ ಭವಿಷ್ಯ ಸದೃಢ- ಸುರೇಶ್ ಬೆಳಗಜೆ ಅಭಿಮತ

July 1, 2020
11:07 PM

ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಸಂಭವಿಸುತ್ತಿದ್ದರೂ ಪತ್ರಿಕೋದ್ಯಮದ ಭವಿಷ್ಯ ಸದೃಢವಾಗಿದೆ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಉಂಟಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು `ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಮುದ್ರಣ ಮಾಧ್ಯಮ ಮುಂದಿನ ದಿನಗಳಲ್ಲಿ ಸೀಮಿತ ಚೌಕಟ್ಟಿನಲ್ಲಿ ಮುಂದುವರಿಯಲಿದೆ. ಸಂಪೂರ್ಣ ಸ್ಥಗಿತಗೊಳ್ಳುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದವರು ಹೇಳಿದರು.

Advertisement

ಮಂಗಳೂರು ವಿವಿ ಪರಿಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸವಾಲುಗಳ ನಡುವೆ ಮಾಹಿತಿಯನ್ನು ನೀಡುವ ಪತ್ರಕರ್ತರ ಸೇವೆ ಮಹತ್ತರ. ಇದು ಹೋಲಿಕೆ ಮಾಡಲಾಗದ ಬಹು ದೊಡ್ಡ ಕಾರ್ಯ ಎಂದರು.
ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಕೃಷ್ಣಮೂರ್ತಿ ಪತ್ರಕರ್ತ ಮುಹಮ್ಮದ್ ಅನ್ಸಾರ್ ಇನೋಳಿ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಿದರು.

ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯ ತೀರ್ಪುಗಾರರಲ್ಲೊಬ್ಬರಾದ ಸ್ಮಿತಾ ಶೆಣೈ ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾವಾರ್ತಾಧಿಕಾರಿ ಖಾದರ್ ಷಾ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

Advertisement

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror