ಪರಿಸರ ದಿನಾಚರಣೆ : ಕೊಡಗಿನಲ್ಲಿ 1 ಲಕ್ಷ ಗಿಡ ನೆಡುವ ಗುರಿ

June 2, 2019
12:00 PM
Advertisement

ಮಡಿಕೇರಿ: ವಿಶ್ವ ಪರಿಸರ ದಿನಾಚರಣೆಯನ್ನು ಇದೇ ಜೂ.11 ರಂದು ನಗರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ 1 ಲಕ್ಷ ಗಿಡ ನೆಡಲು ನಿರ್ಧಿಸಲಾಗಿದೆ.

Advertisement

ಇದೇ ಜೂನ್, 11 ರಂದು ವಿಶ್ವ ಪರಿಸರ ದಿನಾಚರಣೆಯನ್ನು ನಗರದಲ್ಲಿ ಪರಿಸರ ಜಾಗೃತಿ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರದ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆಯುವುದರ ಜೊತೆಗೆ ಸರ್ಕಾರೇತರ ಸಂಸ್ಥೆಗಳ ಸಹಕಾರ ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಪರಿಸರ ದಿನಾಚರಣೆಯನ್ನು ಹಿಂದಿನ ಬಾರಿಯಂತೆ ವ್ಯವಸ್ಥಿತವಾಗಿ ಮತ್ತು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಸೂಚನೆ ನೀಡಿದರು.
ಪರಿಸರ ದಿನಾಚರಣೆಯಂದು ನಗರಸಭೆ ವತಿಯಿಂದ ಸ್ತಬ್ಧಚಿತ್ರ ಏರ್ಪಡಿಸುವುದು, ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವುದು ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಿ.ಶಿವರಾಜು ಅವರು ಹೇಳಿದರು.

Advertisement
Advertisement

ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜು ಅವರು ಮಾತನಾಡಿ ಅರಣ್ಯ ಇಲಾಖೆಯಿಂದ 1 ಲಕ್ಷ ಗಿಡ ನೀಡಲಾಗುವುದು. ಗಿಡಗಳನ್ನು ಸಂರಕ್ಷಣೆ ಮಾಡುವತ್ತ ಗಮನ ಹರಿಸಬೇಕು ಎಂದು ಅವರು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ  ಮಾತನಾಡಿ ಕಳೆದ ಬಾರಿಯಂತೆ ಪರಿಸರ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ಎಷ್ಟು ಕೆರೆಗಳಿವೆ. ಅವುಗಳ ಸಂರಕ್ಷಣೆ ಬಗ್ಗೆ ಸಮಿತಿ ರಚನೆ ಅಗತ್ಯ ಎಂದು ನೂರುನ್ನಿಸ ಅವರು ಹೇಳಿದರು.

Advertisement

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರಾದ ಟಿ.ಜಿ.ಪ್ರೇಮಕುಮಾರ್ ಅವರು ಮಾತನಾಡಿ ಸರ್ಕಾರ ಈ ಬಾರಿ ‘ಜಲವರ್ಷ’ವೆಂದು ವಿಶೇಷ ಕಾರ್ಯಕ್ರಮವಾಗಿ ಹಮ್ಮಿಕೊಂಡಿದ್ದು, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ವತಿಯಿಂದ ವಿಶೇಷ ಅಭಿಯಾನ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕರಾದ ಚಂದ್ರಮೋಹನ್ ಅವರು ಮಾತನಾಡಿ ನದಿ ಪಾತ್ರದಲ್ಲಿ ಹೆಚ್ಚಿನ ಗಿಡ ಬೆಳೆಸಬೇಕು. ಸ್ವಚ್ಛತೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

Advertisement

ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಅವರು ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಉತ್ತಮ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿರುವ 3 ಗ್ರಾ.ಪಂ.ಗಳಿಗೆ ಬಹುಮಾನ ನೀಡಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್  ವತಿಯಿಂದ ಪಟ್ಟಿ ನೀಡುವಂತಾಗಬೇಕು. ಹಾಗೆಯೇ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ-ಕಾಲೇಜು ತಲಾ ಮೂರು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಕಾರ್ಯಕ್ರಮ ಆಯೋಜನೆ ಸಂಬಂಧ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಜೂನ್ 11 ರಂದು ಪರಿಸರ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಹಾಗೂ ಜಾಥಾವನ್ನು ಜೂನಿಯರ್ ಕಾಲೇಜಿನಲ್ಲಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲು ನಿರ್ಧರಿಸಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕಾಶಿನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ.ರವಿಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸೀಮಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ರಾಘವೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ನಗರಸಭೆ ಎಂಜಿನಿಯರ್ ರೀತು ಇತರರು ಹಾಜರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡಿ.24-25 ರಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ |
November 29, 2023
1:45 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಸ್ವಚ್ಛತಾ ಅಭಿಯಾನ | ರಸ್ತೆ ಬದಿ ಕಸ ಚೆಲ್ಲಿದವರೇ ಮತ್ತೆ ಎತ್ತಿದರು….! | ಜನರು ಜಾಗೃತರಾಗಿದ್ದರೆ ಇದು ಸಾಧ್ಯ |
November 25, 2023
10:25 AM
by: ದ ರೂರಲ್ ಮಿರರ್.ಕಾಂ
ದ ಕ ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು | 6314 ಜನರಿಗೆ ವಿವಿಧ ಆರೋಗ್ಯ ಸಮಸ್ಯೆ | ಎಂಡೋ ಸಂತ್ರಸ್ತರ ಸಮಸ್ಯೆ ಸ್ಥಳೀಯವಾಗಿ ಪರಿಹರಿಸಲು ಡಿಸಿ ಸೂಚನೆ |
November 24, 2023
10:41 PM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಗೋಶಾಲೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಗೆ ಅವಕಾಶ
November 24, 2023
10:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror