ಪುತ್ತೂರು: ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಉದ್ಘಾಟನೆ

February 21, 2020
10:36 PM

ಪುತ್ತೂರು: ಅಣಕು ನ್ಯಾಯಾಲಯ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ, ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವೃತ್ತಿಜೀವನದ ಅನುಭವವನ್ನು ನೀಡುತ್ತದೆ ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ನಟರಾಜ್ ಆರ್. ಹೇಳಿದರು.

Advertisement

ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಫೆ.21ರಂದು ಜರುಗಿದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಉಚ್ಛ ನ್ಯಾಯಾಲಯದ ನ್ಯಾಯವಾದಿಗಳಾದ ವಿವೇಕ್ ಸುಬ್ಬ ರೆಡ್ಡಿ ಮಾತನಾಡಿ, ವಕೀಲ ವೃತ್ತಿಗೆ ಕಾನೂನಿನ ಭಾಷೆ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮ ಅಗತ್ಯವಾಗಿದೆ. ಈ ಮೂರು ಅಂಶಗಳನ್ನು ಅಳವಡಿಸಿಕೊಂಡರೆ ವಕೀಲ ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.  ಮತ್ತೋರ್ವ ಅತಿಥಿಯಾದ, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ. ವಿ. ಮಾತನಾಡಿ, ವಕೀಲ ವೃತ್ತಿಯು ಈ ಕಾಲಘಟ್ಟದಲ್ಲಿ ಒಂದು ಉದ್ಯಮವಾಗಿ ಬದಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು, ಮುಂದಿನ ವೃತ್ತಿಜೀವನದಲ್ಲಿ ಕೇವಲ ಹಣವನ್ನು ಸಂಪಾದಿಸುವುದರ ಕಡೆಗೆ ಗಮನಹರಿಸಬಾರದು. ಒಬ್ಬ ಒಳ್ಳೆಯ ವಕೀಲನಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಗಳಾದ ಕೃಷ್ಣ ಕುಮಾರ್ ಶೆಟ್ಟಿ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘವು ತನ್ನ ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ, ರಾಷ್ಟ್ರೀಯ ವಿಚಾರಗಳಿಗೆ ಮಹತ್ವವನ್ನು ನೀಡುತ್ತಿದೆ. ವಿವೇಕಾನಂದ ಕಾನೂನು ಕಾಲೇಜು ಈ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ವಿಜಯನಾರಾಯಣ ಕೆ. ಎಂ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ವಂದಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ
July 18, 2025
10:15 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ
July 18, 2025
10:06 PM
by: ದ ರೂರಲ್ ಮಿರರ್.ಕಾಂ
ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ
July 18, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group